ಉಡುಪಿ: ಇಲ್ಲಿನ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಪಬ್ಲಿಕ್ ಹೀರೋ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮುಂಬೈನಲ್ಲಿ ಮಾಸ್ಕ್ ಕಡ್ಡಾಯವಲ್ಲಶಾನುಭಾಗ್ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸಲಾಗಿದೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.  Sign in to your account
Username or Email Address


Password

 Remember Me


