ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು. ತಮ್ಮ ಮತ್ತು ನಿಖಿಲ್ ವಿರುದ್ಧ ಕೆಲವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತಸಂಘ ಒಂದಾಗಿದ್ದರು ಎಂದು ಕಿಡಿಕಾರಿದರು. ಇದೇ ವೇಳೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡಸ್ತನ ಪದ ಬಳಕೆಗೆ ಹೆಚ್‌.ಡಿ.ಕುಮಾರಸ್ವಾಮಿ ವಿಷಾದಇತ್ತೀಚೆಗಷ್ಟೆ ಮಂಡ್ಯದ ಮದ್ದೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ. ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್ಅಭಿವೃದ್ಧಿ ಆಗಿಲ್ಲ ಅಂದರೆ, ಶಾಸಕರನ್ನು ಜನರು ಪ್ರಶ್ನೆ ಮಾಡುತ್ತಾರೆ. ಆದರೆ ಇವರನ್ನು ಪ್ರಶ್ನೆ ಮಾಡುವವರು ಯಾರು? ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ. 2024ರವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಸಂಸದೆ ಸುಮಲತಾ ವಿರುದ್ಧ ಆಕ್ರೋಶ ಹೊರಹಾಕಿದರು.






 Advertisement 




Sign in to your account
Username or Email Address


Password

 Remember Me


