ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಂದು ನಿನ್ನೆಗಿಂತ ಏರಿಕೆ ಕಂಡಿದೆ. ನಿನ್ನೆ 35 ಕೇಸ್ ದಾಖಲಾಗಿತ್ತು. ಇಂದು ಒಟ್ಟು 78 ಪಾಸಿಟಿವ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ 67 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಇಂದು ಶೂನ್ಯ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ದಾಖಲಾಗಿದೆ. ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ರಾಹುಲ್‌ ಗಾಂಧಿ ಭೇಟಿಈವರೆಗೆ ಒಟ್ಟು ರಾಜ್ಯದಲ್ಲಿ 40,054 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.32%ಕ್ಕೆ ಮತ್ತು ಮರಣ ಪ್ರಮಾಣ 1.28%ಕ್ಕೆ ಇಳಿಕೆ ಕಂಡಿದೆ. ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,569ಕ್ಕೆ ಇಳಿಕೆ ಕಂಡಿದೆ. ಒಟ್ಟು 93 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,45,514 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,849 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,40,634 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,031 ಸ್ಯಾಂಪಲ್ (ಆರ್‌ಟಿಪಿಸಿಆರ್ 18,577 + 5,454 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 67, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 3, ಕೊಪ್ಪಳ 0, ಮಂಡ್ಯ 0, ಮೈಸೂರು 2, ರಾಯಚೂರು 0, ರಾಮನಗರ 2, ಶಿವಮೊಗ್ಗ 0, ತುಮಕೂರು 0, ಉಡುಪಿ 1, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


