ತುಮಕೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.ತುಮಕೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಅದ್ಧೂರಿಯಾಗಿ ಸ್ವಾಗತಿಸಿದರು. ನಂತರ ಸಿದ್ದಗಂಗಾ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಶಿವಕುಮಾರ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಏ.1 ರಂದು ನಡೆದಾಡೋ ದೇವರ ಜನ್ಮ ದಿನಾಚರಣೆ- ಅಮಿತ್ ಶಾ ಕಾರ್ಯಕ್ರಮ ಉದ್ಘಾಟನೆವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಮಾಜಿ ಸಚಿವ ಎಂ.ಬಿ.ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಹಲವರು ಸಾಥ್ ನೀಡಿದರು. ಇದೇ ವೇಳೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.ಹಣೆಗೆ ವಿಭೂತಿ ಇಟ್ಟಿಕೊಂಡು ರಾಹುಲ್ ಗಾಂಧಿ, ಧ್ಯಾನ ಕೇಂದ್ರಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಉಪಾಹಾರ ಸೇವಿಸಿದರು. ಇಡ್ಲಿ, ದೋಸೆ, ಉಪ್ಪಿಟ್ಟು, ಬೋಂದಿ-ಪಾಯಸ ಸೇವಿಸಿದರು. ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆSign in to your account
Username or Email Address


Password

 Remember Me


