ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ವ್ಯಕ್ತಿ ಅನಂದ್ ರೆಡ್ಡಿಯಾಗಿದ್ದು, ಇದೇ ಗ್ರಾಮದ ವಿಷ್ಣುವರ್ಧನ್ ರೆಡ್ಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗಾಯಾಳು ಆನಂದ್ ರೆಡ್ಡಿಯನ್ನು ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿಘಟನೆ ನಂತರ ಆರೋಪಿ ನಾಪತ್ತೆಯಾಗಿದ್ದು, ಈ ಘಟನೆ ಸಂಬಂಧ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಹಂಚಿಕೆ -ಬಜೆಟ್‍ನಲ್ಲಿ ರಾಜ್ಯಕ್ಕೆ 832 ಕೋಟಿ ಮೀಸಲುSign in to your account
Username or Email Address


Password

 Remember Me


