ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಇಂದು 35ಕ್ಕೆ ಇಳಿಕೆ ಕಂಡಿದೆ. ಮರಣ ಪ್ರಕರಣಗಳ ಸಂಖ್ಯೆ 1ರಲ್ಲಿ ಮುಂದುವರಿದಿದೆ.ಬೆಂಗಳೂರಿನಲ್ಲಿ 25 ಕೇಸ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ. ಉಳಿದಂತೆ ಬೆಂಗಳೂರು ಹೊರತು ಪಡಿಸಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ಉಡುಪಿಯಲ್ಲಿ ತಲಾ ಒಂದೊಂದು ಕೇಸ್ ದಾಖಲಾಗಿದೆ. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ಚೆನ್ನಮ್ಮ, ರಾಯಣ್ಣನೂ ಅಲ್ಲ: ನಟ ಚೇತನ್ಈವರೆಗೆ ಒಟ್ಟು ರಾಜ್ಯದಲ್ಲಿ 40,053 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.12%ಕ್ಕೆ ಮತ್ತು ಮರಣ ಪ್ರಮಾಣ 2.85%ಕ್ಕೆ ಇಳಿಕೆ ಕಂಡಿದೆ. ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,585ಕ್ಕೆ ಇಳಿಕೆ ಕಂಡಿದೆ. ಒಟ್ಟು 105 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,45,436 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,756 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,10,688 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,577 ಸ್ಯಾಂಪಲ್ (ಆರ್‌ಟಿಪಿಸಿಆರ್ 20,975 + 6,602 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 25, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 2, ಕೊಪ್ಪಳ 0, ಮಂಡ್ಯ 0, ಮೈಸೂರು 1, ರಾಯಚೂರು 0, ರಾಮನಗರ 2, ಶಿವಮೊಗ್ಗ 0, ತುಮಕೂರು 0, ಉಡುಪಿ 1, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


