ಹುಬ್ಬಳ್ಳಿ: ಹಾವೇರಿ (Haveri) ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಒತ್ತಾಯಿಸಿದ್ದಾರೆ.ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗೆ ಮನವಿ: ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು. ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.Sign in to your account
Username or Email Address


Password

 Remember Me


