ಶಿವಮೊಗ್ಗ: ಮಲೆನಾಡು (Malenadu) ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ (Rain) ಹಿನ್ನೆಲೆ ಆಗುಂಬೆ ಘಾಟಿಯಲ್ಲಿ (Agumbe Ghat) ನಾಳೆಯಿಂದ (ಜೂ.27) ಭಾರಿ ವಾಹನ (Heavy Vehicle) ಸಂಚಾರವನ್ನು ನಿಷೇಧಿಸಲಾಗಿದೆ.ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಭಾರೀ ಮಳೆ- ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿಷೇಧಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದ ಸಂಸದರ ಜೊತೆ ಸಿಎಂ-ಡಿಸಿಎಂ ಸಭೆ


 Advertisement 







 Advertisement 




Sign in to your account
Username or Email Address


Password

 Remember Me


