ತುಮಕೂರು: ಸಿದ್ದರಾಮಯ್ಯ ಅವರು ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇರಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ. ಅದರಂತೆ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಅಂತ ರಾಜಣ್ಣ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಅನಿವಾರ್ಯತೆ ಹೆಚ್ಚಿದೆ. ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲ ಎಂದರೆ ಬಿಜೆಪಿ ಇರಲ್ಲ. ಮಾಜಿ ಪ್ರಧಾನಿ ದೇವೇಗೌಡರವರು ಇಲ್ಲ ಎಂದರೆ ಜೆಡಿಎಸ್ ಇರಲ್ಲ. ಅದರಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಇರಲ್ಲ ಎಂದು ತಿಳಿಸಿದ್ದಾರೆ.ಸಿದ್ದರಾಮಯ್ಯನವರು ಸ್ವಾಮೀಜಿಗಳಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸ್ವಾಮೀಜಿಗಳನ್ನು ದೇವರಂತೆ ನೋಡುತ್ತಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೂ ಸಹ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಸ್ವಾಮೀಜಿಗಳಿಗೆ ಅಗೌರವ ತರುವ ಕೆಲಸವನ್ನು ಯಾವ ನಾಯಕರೂ ಮಾಡುವುದಿಲ್ಲ. ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿಲ್ಲ ಎನ್ನುವುದು ಶುದ್ಧ ಸುಳ್ಳು ಎಂದಿದ್ದಾರೆ.ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಹಲವು ನಾಯಕರು ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್, ಗಾಂಧಿ ಹಿಂದೂವಾದಿಗಳ ಪಕ್ಷ. ಬಿಜೆಪಿ ಗೋಡ್ಸೆ ಹಿಂದೂವಾದಿಗಳ ಪಕ್ಷ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.Sign in to your account
Username or Email Address


Password

 Remember Me


