ಬೆಳಗಾವಿ: ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿಂಡಲಗಾ ಜೈಲಿನಲ್ಲಿ ನಡೆದಿದೆ.ಸಿದ್ದಗೌಡ ಹಿಪ್ಪಲಕರ್(34) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಪಕ್ಕದ ಮನೆಯ ಮಗುವನ್ನ ಕೊಲೆ ಮಾಡಿದ ಕೇಸ್ ಅಡಿಯಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಇದನ್ನೂ ಓದಿ: ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿಸಿದ್ದಗೌಡ ಕಳೆದ ಆರು ವರ್ಷದಿಂದ ಹಿಂಡಲಗಾ ಜೈಲಿನಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ. ಆದರೆ ನಾಲ್ಕು ದಿನಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ಈ ಹಿನ್ನೆಲೆ ಸಿಬ್ಬಂದಿ ತಕ್ಷಣ ಸಿದ್ದಗೌಡನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದಗೌಡ ಮಂಗಳವಾರ(ಇಂದು) ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಅಪ್ಪ-ಮಗನ್ನ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳ ಕಾತರ : ‘ಆಚಾರ್ಯ’ದಲ್ಲಿ ಒಂದಾದ ಮಗಧೀರ ಜೋಡಿಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


