ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 48 ಪಾಸಿಟಿವ್ ಕೇಸ್ ದಾಖಲಾಗಿದ್ದು, ಇಂದು ಕೂಡ ಏಕೈಕ ಮರಣ ಪ್ರಕರಣ ವರದಿಯಾಗಿದೆ.ಬೆಂಗಳೂರಿನಲ್ಲಿ 40 ಕೇಸ್ ದಾಖಲಾಗಿದ್ದು. ಹಲವು ದಿನಗಳ ಬಳಿಕ ನಗರದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇಂದು ತುಮಕೂರಿನಲ್ಲಿ ಏಕೈಕ ಮರಣ ಪ್ರಕರಣ ದಾಖಲಾಗಿದೆ. ಉಳಿದಂತೆ ಬೆಂಗಳೂರು ಹೊರತು ಪಡಿಸಿ ಚಿತ್ರದುರ್ಗ 2, ಕೋಲಾರ 3, ಮೈಸೂರು 1 ಮತ್ತು ಯಾದಗಿರಿಯಲ್ಲಿ 2 ಪಾಸಿಟಿವ್ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಜಗದೀಶ್‌ ಅರ್ಜಿಈವರೆಗೆ ಒಟ್ಟು ರಾಜ್ಯದಲ್ಲಿ 40,051 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.29%ಕ್ಕೆ ಮತ್ತು ಮರಣ ಪ್ರಮಾಣ 2.08%ಕ್ಕೆ ಇಳಿಕೆ ಕಂಡಿದೆ. ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,719ಕ್ಕೆ ಇಳಿಕೆ ಕಂಡಿದೆ. ಒಟ್ಟು 105 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,45,359 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,547 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 74,246 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 16,551 ಸ್ಯಾಂಪಲ್ (ಆರ್‌ಟಿಪಿಸಿಆರ್ 12,428 + 4,123 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು – ಸರ್ಕಾರಕ್ಕೆ ಮಾಹಿತಿ ರವಾನೆಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 40, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 0, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 3, ಕೊಪ್ಪಳ 0, ಮಂಡ್ಯ 0, ಮೈಸೂರು 1, ರಾಯಚೂರು 0, ರಾಮನಗರ 0, ಶಿವಮೊಗ್ಗ 0, ತುಮಕೂರು 0, ಉಡುಪಿ 0, ಉತ್ತರ ಕನ್ನಡ 0, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 2 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


