ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ.ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ಅನುಶ್ರೀ ಕುಸಿದು ಬಿದ್ದಾಳೆ. ಇದನ್ನೂ ಓದಿ: ಜೂನ್ 16, 17, 18 ಸಿಇಟಿ ಪರೀಕ್ಷೆ: ಅಶ್ವಥ್ ನಾರಾಯಣಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಗಳು ಪರೀಕ್ಷೆ ಬರೆಯಲು ಹೋಗಿದ್ದಾಳೆ. ಚೆನ್ನಾಗಿ ಪರೀಕ್ಷೆ ಬರೆದು ಬರುತ್ತಾಳೇ ಎಂಬ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಸಿಡಿಲು ಬಡಿತಂದಾಗಿದೆ. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಕಳುಹಿಸಿದ ಬಿಇಓSign in to your account
Username or Email Address


Password

 Remember Me


