ಬಾಗಲಕೋಟೆ: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಬಾಗಲಕೋಟೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಬ್ ತೆಗೆಯಲು ನಿರಾಕರಿಸಿ ಮನೆಗೆ ಹಿಂದಿರುಗಿದ್ದಾಳೆ.ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದರು. ಈ ವೇಳೆ ಅನೇಕ ಮಂದಿ ವಿದ್ಯಾರ್ಥಿನಿಯರು ಹಿಜಬ್ ತೆರೆದಿಟ್ಟು, ಪರೀಕ್ಷಾ ಕೇಂದ್ರದ ಒಳಗೆ ಪರೀಕ್ಷೆ ಬರೆಯಲು ಹೋದರು. ಆದರೆ ವಿದ್ಯಾರ್ಥಿನಿಯೊಬ್ಬಳು ಮಾತ್ರ ಬುರ್ಕಾ ತೆಗೆಯಲು ಒಪ್ಪಲಿಲ್ಲ. ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆಈ ವೇಳೆ ವಿದ್ಯಾರ್ಥಿನಿ ಮನವೊಲಿಸಲು ಶಿಕ್ಷಕರು ಪರೀಕ್ಷಾ ಸಿಬ್ಬಂದಿ ಯತ್ನಿಸಿದ್ದಾರೆ. ಆದರೂ ಹಿಜಬ್ ತೆಗೆಯಲು ಒಪ್ಪದ ವಿದ್ಯಾರ್ಥಿನಿ ಕೊನೆಗೆ ಪರೀಕ್ಷೆ ಬರೆಯದೇ ಪೋಷಕರ ಜೊತೆ ಮನೆಗೆ ತೆರಳಿದ್ದಾಳೆ. ಇಂದು ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ಎಲ್ಲ ಶಾಲೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿದೆ. ಅಲ್ಲದೇ ಶಾಲೆಯ ಸುತ್ತಮುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಗೊಳಿಸಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ಹಿಜಬ್ ತೆಗೆದು SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು
 







 Advertisement 




 






 Advertisement 




Sign in to your account
Username or Email Address


Password

 Remember Me


