ಬೆಳಗಾವಿ: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಆರ್ಥಿಕ ನಿರ್ಬಂಧ ಹೇರಲು ನಾವು ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ಶಾಸಕ ಅನಿಲ ಬೆನಕೆ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಹಿಂದೂ ಚಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರ ನಿರ್ಬಂಧ ಕುರಿತು ಮಾತನಾಡಿದ ಅವರು, ಜಾತ್ರೆಗಳಲ್ಲಿ ನಿರ್ಬಂಧ ಹಾಕುವ ಪ್ರಶ್ನೆ ಬರುವುದಿಲ್ಲ. ನಾವು ಕೂಡ ನಿರ್ಬಂಧ ಹಾಕುವುದಿಲ್ಲ. ಜನರು ನಿರ್ಬಂಧ ಹಾಕಿದ್ರೇ ನಮಗೆ ಏನೂ ಹೇಳಲು ಆಗಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಂಡೀಗಢದ ಮೇಲಿನ ಹಕ್ಕಿಗಾಗಿ ಪಂಜಾಬ್ ವಿಲ್ ಫೈಟ್: ಭಗವಂತ್ ಮಾನ್ಆರ್ಥಿಕ ನಿರ್ಬಂಧ ಹೇರಲು ನಾವು ಅವಕಾಶವನ್ನೇ ಕೊಡುವುದಿಲ್ಲ. ಜನರು ಅಲ್ಲೇ ಖರೀದಿ ಮಾಡಬೇಕು. ಇಲ್ಲೇ ಮಾಡಬೇಕು ಅನ್ನೋದು ತಪ್ಪು. ನಾನು ಒಬ್ಬ ವಕೀಲರಾಗಿ ಹೇಳ್ತೆನಿ. ಎಲ್ಲರಿಗೂ ಬೇಕಾದಲ್ಲಿ ವ್ಯವಹಾರ ಮಾಡಲು ಅವಕಾಶವಿದೆ. ಎಲ್ಲಿಂದ ಏನೂ ಖರೀದಿ ಮಾಡಬೇಕು ಎಂದು ಜನರು ತೀರ್ಮಾನ ಮಾಡಬೇಕು ಎಂದು ಹೇಳಿದರು.Sign in to your account
Username or Email Address


Password

 Remember Me


