ಶಿವಮೊಗ್ಗ: ಇಂದಿನಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಈ ನಡುವೆ ಶಿವಮೊಗ್ಗ ನಗರದ ಮೇರಿ ಇನ್ ಮ್ಯಾಕುಲೇಟ್ ಹೈಸ್ಕೂಲ್‍ನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಡಲು ಬಂದ ಪೋಷಕರ ಮೇಲೆ ಜೇನು ದಾಳಿ ನಡೆಸಿದೆ.ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಜೇನು ದಾಳಿಗೆ ಒಳಗಾದ ವಿದ್ಯಾರ್ಥಿಗಳಿಗೆ ಸಮಯ ಆದ ಕಾರಣ, ಹೆಚ್ಚುವರಿ ಸಮಯ ನೀಡಲು ಡಿಡಿಪಿಐ ಸೂಚನೆ ನೀಡಿದ್ದಾರೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಪರೀಕ್ಷೆ ಬರೆಯುತ್ತಿದ್ದಾರೆ. ಜೇನು ದಾಳಿಯ ಪರಿಣಾಮ ಐವರು ವಿದ್ಯಾರ್ಥಿಗಳು ಹಾಗೂ 12 ಜನ ಪೋಷಕರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವುಗಾಯಗೊಂಡ ಪೋಷಕರನ್ನು ಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಂಜೀವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಜೇನು ದಾಳಿಯಾದ ಶಾಲೆಯ ಬಳಿಯೇ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ವಾಹಿನಿಯ ಕ್ಯಾಮೆರಾಮ್ಯಾನ್‍ಗೂ ಸಹ ಜೇನು ದಾಳಿ ನಡೆಸಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಶಾಲೆಯ ಬಳಿ ಇನ್ನು ಜೇನು ಗೂಡು ಕಟ್ಟಿಕೊಂಡಿದ್ದು, ಅದನ್ನು ತೆಗೆಯಲು ಸೂಚಿಸಿರುವುದಾಗಿ ಡಿಡಿಪಿಐ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಕಳುಹಿಸಿದ ಬಿಇಓಶಿವಮೊಗ್ಗ ಜಿಲ್ಲೆಯಲ್ಲಿ 94 ಪರೀಕ್ಷಾ ಕೇಂದ್ರದಲ್ಲಿ 24,370 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯತ್ತಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಾ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ನಗರದ ಕಸ್ತೂರ್ ಬಾ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ಹಿಜಬ್ ತೆಗೆದು ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸ್ ತೆರಳಿದ್ದರು. ಬಳಿಕ ವಾಪಸ್ ಬಂದು ಪರೀಕ್ಷೆಗೆ ಹಾಜರಾಗಿದ್ದಾರೆ.






 Advertisement 




Sign in to your account
Username or Email Address


Password

 Remember Me


