ಬೆಂಗಳೂರು: ರಾಜ್ಯದಲ್ಲಿ  ಇಂದು ಒಟ್ಟು 64 ಪಾಸಿಟಿವ್ ಕೇಸ್ ದಾಖಲಾಗಿದ್ದು, ಏಕೈಕ ಮರಣ ಪ್ರಕರಣ ವರದಿಯಾಗಿದೆ.ಬೆಂಗಳೂರಿನಲ್ಲಿ 51 ಕೇಸ್ ಸಹಿತ 1 ಮರಣ ಪ್ರಕರಣ ದಾಖಲಾಗಿದೆ. ಇದು ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣವಾಗಿದೆ. ಈವರೆಗೆ ಒಟ್ಟು ರಾಜ್ಯದಲ್ಲಿ 40,050 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.24%ಕ್ಕೆ ಮತ್ತು ಮರಣ ಪ್ರಮಾಣ 1.56%ಕ್ಕೆ ಇಳಿಕೆ ಕಂಡಿದೆ. ಇದನ್ನೂ ಓದಿ: ರಾಧಿಕಾ ಬಂದ ಮೇಲೆ ಯಶ್ ಅದೃಷ್ಟ ಇನ್ನೂ ಹೆಚ್ಚಾಯಿತು: ಶಿವಣ್ಣರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,777ಕ್ಕೆ ಇಳಿಕೆ ಕಂಡಿದೆ. ಒಟ್ಟು 62 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,45,311 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,442 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,504 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 26,596 ಸ್ಯಾಂಪಲ್ (ಆರ್‌ಟಿಪಿಸಿಆರ್ 21,485 + 5,111 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದಲಿತರ ಮನೆಯಲ್ಲಿ ಬಿಜೆಪಿ ನಾಯಕರಿಂದ ಸಹಪಂಕ್ತಿ ಭೋಜನಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 51, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 4, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 1, ರಾಯಚೂರು 0, ರಾಮನಗರ 2, ಶಿವಮೊಗ್ಗ 0, ತುಮಕೂರು 1, ಉಡುಪಿ , ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


