ಕಲಬುರಗಿ: ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಮರಳಿನ ಟಿಪ್ಪರ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳಿಯರು ಟಿಪ್ಪರ್‌ಗೆ ಬೆಂಕಿ ಹಚ್ಚಿದ ಘಟನೆ ನಗರದ ಹೀರಾಪುರ ಬಡಾವಣೆಯ ಫ್ಲೈಓವರ್ ಬಳಿ ನಡೆದಿದೆ.ಮನೀಷ್ ಮಲ್ಲಿಕಾರ್ಜುನ (10) ಮೃತ ಬಾಲಕ. ಪೋಷಕರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟೀಪರ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಬಾಲಕ ಸ್ಥಳದಲ್ಲೇ ಸಾವುಗೀಡಾಗಿದ್ದಾನೆ. ಟಿಪ್ಪರ್ ಮೇಲೆ ಹರಿದ ಪರಿಣಾಮ ಬಾಲಕ ದೇಹ ಛಿದ್ರ ಛಿದ್ರಗೊಂಡಿದೆ.ಈ ವೇಳೆ ಉದ್ರೇಕಗೊಂಡ ಸ್ಥಳೀಯರು ಟಿಪ್ಪರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಟಿಪ್ಪರ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆ ಸಂಬಂಧ ಸ್ಥಳಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದನ್ನೂ ಓದಿ: ಹಿಜಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಣೆ – ಭಾರತೀಯ ಮೂಲದ ರೆಸ್ಟೋರೆಂಟ್ ಬಂದ್ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಾಗಿದ್ದು, ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಘಟನೆ ಸಂಬಂಧಿಸಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ರನ್ನು ಮರಳಿ ಕಳುಹಿಸು – ಅಭಿಮಾನಿಯಿಂದ ದೇವರಿಗೆ ಪತ್ರSign in to your account
Username or Email Address


Password

 Remember Me


