ಬಳ್ಳಾರಿ: ಬೈಕ್ ಮತ್ತು ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸವಾರರು ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ತಾಂಡಾ ಬಳಿಯ ಮುಖ್ಯರಸ್ತೆಯಲ್ಲಿ ಭಾನುವಾರ(ಇಂದು) ಮುಂಜಾನೆ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ಕನಿಷ್ಟ 12 ಮಂದಿ ಪತ್ರಕರ್ತರ ಹತ್ಯೆದ್ವಿಚಕ್ರ ವಾಹನದಲ್ಲಿ ಕೆಂಚನಗುಡ್ಡ ತಾಂಡಾ ನಿವಾಸಿಗಳಾದ ಬಸವರಾಜ್ ನಾಯ್ಕ(28) ಮತ್ತು ಕಾರ್ತಿಕ್ ನಾಯ್ಕ(7) ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸಿರುಗುಪ್ಪ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಶವ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಬೈಕ್ ಸವಾರನ ಅತಿಯಾದ ವೇಗ ಬೈಕ್ ಚಾಲನೆ ಕಾರಣ ಎಂದು ಹೇಳಲಾಗಿದೆ. ಮೃತರ ಕುಟುಂಬದ ರೋಧನ ಮುಗಿಲು ಮುಟ್ಟಿದೆ.  ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆSign in to your account
Username or Email Address


Password

 Remember Me


