ನವದೆಹಲಿ: ಸತತ ನಾಲ್ಕನೇ ದಿನ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ 80 ಪೈಸೆ ಏರಿಕೆಯಾಗಿದೆ. ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ವಾಹ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 103.09 ರೂ ಇದ್ದ ಪೆಟ್ರೋಲ್ ದರ 103.91 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 87.35 ರೂ ಇದ್ದ ಡೀಸೆಲ್ ದರ ರೂ. 88.12ಗೆ ಏರಿಕೆಯಾಗಿದೆ. ಇದನ್ನೂ ಓದಿ: ರಫ್ತಿನಲ್ಲಿ ಗುಜರಾತ್ ಫಸ್ಟ್ – ಕರ್ನಾಟಕಕ್ಕೆ 3ನೇ ಸ್ಥಾನದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ  ರೂ.98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.89.87 ದಾಖಲಾಗಿದೆ.ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ. ಪೆಟ್ರೋಲ್ ದರ ರೂ.113.35, ಡೀಸೆಲ್ ರೂ.97.55 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಹೈದರಾಬಾದ್‍ನಲ್ಲಿ ಲೀಟರ್‌ಗೆ ಪೆಟ್ರೋಲ್ ಬೆಲೆ 111.78ರೂ ಹಾಗೂ ಡೀಸೆಲ್‍ಗೆ 98.08ರೂ ದಾಖಲಾಗಿದೆ. ಲಖನೌದಲ್ಲಿ ಪೆಟ್ರೋಲ್ ದರ 98.44ರೂ ಹಾಗೂ ಡೀಸೆಲ್ ದರ 90 ರೂಗೆ ಏರಿಕೆಯಾಗಿದೆ.ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.Sign in to your account
Username or Email Address


Password

 Remember Me


