ಮೈಸೂರು: ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಆದರೆ ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ. ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲ್ಲೂ ಒತ್ತಡವಿದೆ. ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಲಿದ್ದು, ನಂತರ ನಾನು ಸಕ್ರೀಯ ರಾಜಕಾರಣದಲ್ಲಿ ಮಾತ್ರ ಇರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀನನಗೆ ರಾಜಕೀಯ ಜನ್ಮ ಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನು ಸೋಲಿಸಿದರು. ಹಾಗೆಂದು ನಾನು ಅವರನ್ನು ದ್ವೇಷಿಸಲ್ಲ. ಈಗ ಅವರೇ ಮತ್ತೆ ಸ್ಪರ್ಧೆಗೆ ಕರೆಯುತ್ತಿದ್ದಾರೆ ಎಂದರು.ಇದೇ ವೇಳೆ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹಾಕಿರೋದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವ್ಯಾಪಾರಕ್ಕೆ ನಿರ್ಬಂಧ ಹಾಕುವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆಯೇ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಜಬ್, ದುಪ್ಪಟ್ಟ, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ: ಸಿದ್ದರಾಮಯ್ಯ ವಿರುದ್ಧ BJP ಕಿಡಿಹುಟ್ಟೂರಲ್ಲಿ ಸೆಲ್ಫಿ ಕ್ರೇಜ್:
ಸ್ವಗ್ರಾಮ ಸಿದ್ದರಾಮಯ್ಯನ ಹುಂಡಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರೊಂದಿಗೆ ನೂರಾರು ಮಂದಿ ಗ್ರಾಮಸ್ಥರು ಸೆಲ್ಫಿಗೆ ಮುಗಿಬಿದ್ದರು. ಮನೆಯ ಪಡಸಾಲೆಯಲ್ಲೇ ಸೆಲ್ಫಿಗೆ ಅವಕಾಶ ಕಲ್ಪಿಸಲಾಗಿತ್ತು. ಸೆಲ್ಫಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದೇ ವೇಳೆ `ಮುಂದಿನ ಸಿಎಂ ಸಿದ್ದರಾಮಯ್ಯಗೆ ಜೈ’ ಎಂಬ ಘೋಷಣೆ ಕೂಗಿ ಜೈಕಾರ ಹಾಕಿದರು.Sign in to your account
Username or Email Address


Password

 Remember Me


