ಬಿಗ್ ಬಾಸ್ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಮೊದಲ ಬಾರಿಗೆ ನಿರ್ದೇಶಿಸಿರುವ ‘ನಟ ಭಯಂಕರ’ ಸಿನಿಮಾದ ಹಾಡುಗಳು ಇಂದು ರಿಲೀಸ್ ಆಗಿವೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ  ಮಾಡಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು. ಇದನ್ನೂ ಓದಿ : ಶ್ರುತಿ ಹಾಸನ್ ಜತೆ ನನ್ನ ಮದುವೆ ಆಗಿದೆ: ಸ್ಫೋಟಕ ಮಾಹಿತಿ ಹಂಚಿಕೊಂಡ ಬಾಯ್ ಫ್ರೆಂಡ್ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ  ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ,  ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳಿತನ್ನು ಹಾರೈಸಿದರು. ಇದನ್ನೂ ಓದಿ : ವರುಣ್ ದವನ್ ಜತೆ ‘ಸಿಟಾಡೆಲ್’ ನಲ್ಲಿ ಸಮಂತಾ: ಕ್ಯಾಮರಾ ಕಣ್ಣಿಗೆ ಹಬ್ಬಚೊಚ್ಚಲು ಸಿನಿಮಾ ಕುರಿತು ಮಾತನಾಡಿದ ಪ್ರಥಮ್, ‘ಭಾರೀ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು. ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ’ ಎಂದರು. ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.Sign in to your account
Username or Email Address


Password

 Remember Me


