ದೊಡ್ಡಬಳ್ಳಾಪುರದಲ್ಲಿ ಕೆಜಿಎಫ್ ಚಾಪ್ಟರ್-2 ಚಿತ್ರದ ಟ್ರೈಲರ್ ಅನ್ನು ಬೃಹತ್ ಎಲ್‍ಇಡಿ ಪರದೆಯ ಮೂಲಕ ವಿಕ್ಷಣೆಗೆ ಯಶ್ ಅಭಿಮಾನಿಗಳು ವ್ಯವಸ್ಥೆ ಮಾಡಿಕೊಂಡಿದ್ದಾರೆ.ಕೆಜಿಎಫ್-2 ಸಿನಿಮಾಕ್ಕಾಗಿ ಇಡೀ ಭಾರತವೇ ಎದುರು ನೋಡುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ಚಿತ್ರ ಕೆಜಿಎಫ್ ಚಾಪ್ಟರ್-1 ಸಲ್ಲುತ್ತದೆ. ಇದೀಗ ಕೆಜಿಎಫ್ ಚಾಪ್ಟರ್-2ರ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. ಈ ಮಧ್ಯೆ ‘ಕೆಜಿಎಫ್ 2’ ಟ್ರೈಲರ್ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆ ಹಲವರಲ್ಲಿ ಇತ್ತು. ಅದಕ್ಕೂ ಉತ್ತರ ಸಿಕ್ಕಿದ್ದು, ಚಿತ್ರತಂಡ ಅಧಿಕೃತ ಮಾಹಿತಿ ಹೊರಹಾಕಿದೆ. ಇದನ್ನೂ ಓದಿ: RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಯಶ್ ಅಭಿನಯದ ಈ ಚಿತ್ರದ ಟ್ರೈಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿದ್ದು, ಯಾವಾಗಲೂ ಕೂಡ ಮಿಂಚು ಬರುವ ಮುನ್ನ ಗುಡುಗು ಬರುತ್ತದೆ ಎಂದು ಟ್ರೈಲರ್ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡಿದೆ ಚಿತ್ರತಂಡ. ಅಭಿಮಾನಿಗಳು ಸಿನಿಮಾದ ಅಪ್‍ಡೇಟ್ ಏನೂ ಸಿಗುತ್ತಿಲ್ಲ ಎಂದು ಹಲವು ಸಮಯದಿಂದ ಬೇಸರ ಮಾಡಿಕೊಂಡಿದ್ದರು. ಟ್ವಿಟ್ಟರ್‍ನಲ್ಲೂ ಚಿತ್ರದ ಅಪ್‍ಡೇಟ್‍ಗಾಗಿ ಕೇಳುತ್ತಿದ್ದರು. ಇದೀಗ ಅವರೆಲ್ಲರಿಗೂ ಖುಷಿಯಾಗುವಂತಹ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘ ದೊಡ್ಡಬಳ್ಳಾಪುರ ತಾಲೂಕು ಘಟಕದಿಂದ ಬೃಹತ್ ಎಲ್‍ಇಡಿ ಪರದೆ ಮೂಲಕ ಟ್ರೈಲರ್ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್ಈ ಕುರಿತಂತೆ ಪೋಸ್ಟರ್ ಬಿಡುಗಡೆ ಮಾಡಿರುವ ಅಭಿಮಾನಿಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ ಯಶವಂತ್ ಆರಾಧ್ಯ, ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಟ್ರೈಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಬೃಹತ್ ಎಲ್‍ಇಡಿ ಪರದೆ ಮೂಲಕ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಟ್ರೈಲರ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.Sign in to your account
Username or Email Address


Password

 Remember Me


