ಚಿತ್ರದುರ್ಗ: ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.ನಾಗರಾಜ್(43), ವೀರೇಶ್ (15), ಸಂತೋಷ (13), ಶೈಲಜ (40) ಮೃತರು. ಇವರೆಲ್ಲರೂ ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ತಡರಾತ್ರಿ ಸ್ವಗ್ರಾಮ ಬಿದುರ್ಗಕ್ಕೆ ತೆರಳುತಿದ್ದರು. ಈ ವೇಳೆ ಚಿತ್ರದುರ್ಗದಿಂದ ಬರುತ್ತಿದ್ದ ಖಾಸಗಿ ಬಸ್‍ವೊಂದು ಓವರ್ ಟೇಕ್ ಮಾಡಿ ಮುನ್ನುಗ್ಗುವಾಗ ಎದುರು ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಯುವತಿಯೂ ಸಾವುಈ ಅವಘಡಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣದ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?Sign in to your account
Username or Email Address


Password

 Remember Me


