ಬೆಂಗಳೂರು: ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ ಹಾಕಿರುವ ಪ್ರಕರಣದ ವಿಚಾರವಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.ಕಬ್ಬನ್ ಪಾರ್ಕ್ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಘಟನೆ ಸಂಬಂಧ ಬಂಧಿತನಾಗಿರುವ ರಹಮತ್ ಉಲ್ಲಾಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ಅನಾಮಧೇಯ ವ್ಯಕ್ತಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ ಆರೋಪಿಯು ವಾಟ್ಸಪ್ ಕಾಲ್ ಮಾಡಿ ಯಾರ ಜೊತೆ ಮಾತನಾಡಿದ್ದಾನೆ. ಮಾತನಾಡಿದ್ದರೆ ಯಾರ ಜೊತೆ ಏನು ಮಾತನಾಡಿದ್ದಾನೆ ಎಂಬ ವಿಚಾರದ ಬಗ್ಗೆ ಪೊಲೀಸರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸರಿಂದ ಸಿಡಿಆರ್ ದಾಖಲೆಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಪ್ರಕರಣದ ಆರೋಪಿ ವಿಚಾರಣೆಯನ್ನು ಇಂಟಲಿಜೆನ್ಸ್ ತಂಡ ಕೂಡ ತನಿಖೆ ಮಾಡುತ್ತಿದೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣಆರೋಪಿಯ ಎಲ್ಲಾ ಪೂರ್ವಪರವನ್ನು ತಿಳಿದುಕೊಳ್ಳುವ ಕೆಲಸವನ್ನು ಪ್ರಾಥಮಿಕವಾಗಿ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.Sign in to your account
Username or Email Address


Password

 Remember Me


