ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.ಕ್ಷೇತ್ರದ ಶಾಸಕರಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ರೋಬೋಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಹಾಗೆಯೇ, ಅದು ನೀಡಿದ ಉತ್ತರ ನೆರವನ್ನು ಕಂಡು ಬೆರಗಾದರು. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣರೋಬೋ ಬೋಧನೆ ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮಥ್ರ್ಯವನ್ನು ವೀಕ್ಷಿಸಲಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.ರೋಬೋ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರ್ಕಾರಿ ಶಾಲಾ-ಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನುಡಿದರು.ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!ಇಂಡಸ್ ಟ್ರಸ್ಟ್‌ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು. Sign in to your account
Username or Email Address


Password

 Remember Me


