ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.ಮಾರ್ಚ್ 27ರ ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾಅತಿಥಿಗಳು ಯಾರು?ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನೂ ಓದಿ:  ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳುಅರೆಬಿಕ್ ಮತ್ತು ಇಂಗ್ಲಿಷ್ ನಲ್ಲಿ ಸಬ್ ಟೈಟಲ್ಐದು ಭಾಷೆಗಳ ಹೊರತಾಗಿ ಉಳಿದಂತೆ ಎಲ್ಲ ಭಾಷೆಯ ಚಿತ್ರಗಳಲ್ಲೂ ಇಂಗ್ಲಿಷ್ ನಲ್ಲಿ ಸಬ್ ಟೈಟಲ್ ಇರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ದುಬೈನಲ್ಲಿ ಮಾತ್ರ ಸಬ್ ಟೈಟಲ್ ಭಾಷೆ ಬದಲಾಗಲಿದೆ. ಇಲ್ಲಿ ಅರೆಬಿಕ್ ಭಾಷೆಯ ಸಬ್ ಟೈಟಲ್ ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಚೀನಾ ಸೇರಿದಂತೆ ಇತರ ಭಾಷೆಯ ಸಬ್ ಟೈಟಲ್ ಗೂ ಬೇಡಿಕೆಯಿದ್ದು, ಅಲ್ಲೆಲ್ಲ ಇಂಗ್ಲಿಷ್ ನಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ70 ದೇಶಗಳಲ್ಲಿ ಕೆಜಿಎಫ್ 2 ಬಿಡುಗಡೆಜಪಾನ್, ಅಮೆರಿಕಾ, ಇಂಗ್ಲೆಂಡ್, ದುಬೈ ಹೀಗೆ 70ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ ನಿರ್ಮಾಪಕರು. ಈಗಾಗಲೇ ಚಿತ್ರಕ್ಕೆ ಸಾಕಷ್ಟು ಬೇಡಿಕೆ ಬಂದಿದ್ದು, ಅಷ್ಟೂ ದೇಶಗಳಲ್ಲೂ ಏಕಕಾಲಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಚಿತ್ರಕ್ಕೆ ಹೆಚ್ಚಿನ ಹಣವೂ ವಿದೇಶದಿಂದಲೇ ಹರಿದು ಬರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆಪ್ರಿ ರಿಲೀಸ್ ಇವೆಂಟ್ ಇಲ್ಲಕೋವಿಡ್ ನಿಯಮ ಮತ್ತು ಅಪ್ಪು ನಿಧನದಿಂದಾಗಿ ಈ ಬಾರಿ ಪ್ರಿ ರಿಲೀಸ್ ಇವೆಂಟ್ ಇರುವುದಿಲ್ಲ ಎಂದು ತಿಳಿಸಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರ್. ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ನಿರ್ಮಾಪಕರಿಗೆ ಸಾಕಷ್ಟು ಒತ್ತಡವಿದ್ದು, ಬೇರೆ ಭಾಷೆಯಲ್ಲೂ ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ಕೋವಿಡ್ ನಿಯಮ ಮತ್ತು ಅಪ್ಪು ನಿಧನದ ಕಾರಣದಿಂದಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಿಲ್ಲ ಚಿತ್ರತಂಡ.Sign in to your account
Username or Email Address


Password

 Remember Me


