ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೇವಲ 92 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಇಬ್ಬರು ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ.ಸದ್ಯ ರಾಜ್ಯದಲ್ಲಿ 1,838 ಸಕ್ರಿಯ ಪ್ರಕರಣಗಳಿವೆ. ಇಂದು 143 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,02,956 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ಥಿಯೇಟರ್‌ಗಳಿಂದ ‘ಜೇಮ್ಸ್’ ಸಿನಿಮಾ ತೆಗೆದುಹಾಕಲು ಬಿಜೆಪಿಯಿಂದ ಒತ್ತಡ: ಸಿದ್ದರಾಮಯ್ಯರಾಜ್ಯದಲ್ಲಿ ಇಂದು ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ 40041 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ 2.17% ಇದೆ. ರಾಜ್ಯದ 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟುಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 81, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 0, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 0, ಉಡುಪಿ 1, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ.ಇಂದಿನ 22/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/sjNf1R1BsE @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/9eODNubWUK— K'taka Health Dept (@DHFWKA) March 22, 2022Sign in to your account
Username or Email Address


Password

 Remember Me


