ಕರ್ನಾಟಕ ರತ್ನ ಪುನೀತ್ ರಾಜ್‌ ಕುಮಾರ್( ಮರಣೋತ್ತರ) ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ  ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿರಾಘವೇಂದ್ರ ರಾಜ್ ಕುಮಾರ್ ಭಾವುಕಸಭೆಯ ಕೆಳಗೆ ಕುಳಿತಿದ್ದ ನಟ ರಾಘವೇಂದ್ರ ರಾಜಕುಮಾರ್ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಪ್ರಶಸ್ತಿ ನೀಡುವಾಗ ಭಾವುಕರಾದರು. ಇದೇ ವೇಳೆ 15 ಚಿನ್ನದ ಪದಕ ಪಡೆದ ಜಿ.ಎಂ.ಭಾವನ ಅವರನ್ನು ಕರೆದು ರಾಘವೇಂದ್ರ ರಾಜಕುಮಾರ್ ಬೆನ್ನು ತಟ್ಟಿ ಅಭಿನಂದಿಸಿದರು.Sign in to your account
Username or Email Address


Password

 Remember Me


