ಹಾಸನ: ಸಾರಿಗೆ ಬಸ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.ಸಾರಿಗೆ ಬಸ್ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿರುವ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ಬೇಲೂರಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಚುನಾವಣೆವರೆಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿನಡೆದಿದ್ದೇನು?: ಪರೀಕ್ಷೆ ಮುಗಿದ ನಂತರ ಗೆಳೆಯನೊಬ್ಬನ ಆಲ್ಟೋ ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಹೊರಟಿದ್ದರು. ವಿದ್ಯಾರ್ಥಿಗಳು ಬೇಲೂರಿನಿಂದ ಹಾಸನದ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಹಾಸನದಿಂದ ಚಿಕ್ಕಮಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಬಸ್, ಕಾರಿಗೆ ಡಿಕ್ಕಿಯಾಗಿದೆ. ಆಗ ಕಾರಿನಲ್ಲಿದ್ದ  ನಾಲ್ವರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಇದೆ ಮೊದಲ ಬಾರಿ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿಮೃತರೆಲ್ಲರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


