ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇಂದು ಕೇವಲ 71 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಹಾಗೆಯೇ ಇಬ್ಬರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.ಇಂದು 173 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 39,02,813 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,891 ಇದೆ. ರಾಜ್ಯದಲ್ಲಿ ಇದುವರೆಗೆ 40039 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ 2.81% ಇದೆ. ಇದನ್ನೂ ಓದಿ: ಮೂರು ಕೃಷಿ ಕಾಯ್ದೆಗಳಿಗೆ ಶೇ.86 ರೈತ ಸಂಘಟನೆಗಳ ಬೆಂಬಲವಿತ್ತು: ʻಸುಪ್ರೀಂʼ ಸಮಿತಿ ವರದಿ ಬಹಿರಂಗಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 53, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 5, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 0, ಕೊಪ್ಪಳ 0, ಮಂಡ್ಯ 0, ಮೈಸೂರು 0, ರಾಯಚೂರು 0, ರಾಮನಗರ 2, ಶಿವಮೊಗ್ಗ 2, ತುಮಕೂರು 1, ಉಡುಪಿ 0, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ.Sign in to your account
Username or Email Address


Password

 Remember Me


