– ಕಸದ ಲಾರಿಗೆ ಬಾಲಕಿ ಬಲಿ, ಹೆಬ್ಬಾಳದ ದುರ್ಘಟನೆಗೆ ಆಕ್ರೋಶ
– ಗಬ್ಬೆದ್ದು ಹೋಗಿರುವ ಪಾಲಿಕೆಯನ್ನು ಮೊದಲು ಸ್ವಚ್ಛ ಮಾಡಬೇಕುಬೆಂಗಳೂರು: ಹೆಬ್ಬಾಳದ ಬಳಿ ಶಾಲಾ ಬಾಲಕಿಯೊಬ್ಬಳನ್ನು ಬಿಬಿಎಂಪಿ ಕಸದ ಲಾರಿ ಬಲಿ ಪಡೆದ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ. 1/4— H D Kumaraswamy (@hd_kumaraswamy) March 21, 2022ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಗಬ್ಬೆದ್ದು ಹೋಗಿರುವ ಪಾಲಿಕೆಯನ್ನು ಮೊದಲು ಸ್ವಚ್ಚ ಮಾಡಬೇಕು ಎಂದು ಹೇಳಿದ್ದಾರೆ. ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ ಎಂದಿದ್ದಾರೆ. ಇದನ್ನೂ ಓದಿ: ಭಗವದ್ಗೀತೆಯ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ: ನ್ಯಾಯವಾದಿ ಸುರೇಂದ್ರ ಉಗಾರೆಸ್ವತಃ ಗೌರವಾನ್ವಿತ ಹೈ ಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ. 3/4— H D Kumaraswamy (@hd_kumaraswamy) March 21, 2022ಭಾನುವಾರ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಫ್ಲೈಓವರ್ ಅಂಡರ್ ಪಾಸ್‌ನಲ್ಲಿ ನೀರು ತುಂಬಿತ್ತು. ಹೀಗಾಗಿ ಮಕ್ಕಳು ಅಂಡರ್ ಪಾಸ್‌ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಆ ಸಂದರ್ಭದಲ್ಲಿ ದುರಂತ ಘಟಿಸಿದೆ ಎಂದು ತಿಳಿಸಿದರು.ಸ್ವತಃ ಗೌರವಾನ್ವಿತ ಹೈಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ, ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನಸಭೆ ಕಲಾಪಕ್ಕೆ ನೂರಾರು ಶಾಸಕರು ಚಕ್ಕರ್ – ಸಹಿ ಮಾಡಿ ಶಾಸಕರು ಹೋಗೋದು ಎಲ್ಲಿಗೆ..?ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ. 4/4— H D Kumaraswamy (@hd_kumaraswamy) March 21, 2022ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.Sign in to your account
Username or Email Address


Password

 Remember Me


