ಬೆಂಗಳೂರು: ಲಕ್ಷಾಂತರ ಜನ ರೈತರ ಬದುಕಿಗೆ ಬೆನ್ನೆಲುಬು ಆಗಿರುವ ಅಡಿಕೆ ಬಳಕೆ ಆರೋಗ್ಯಕ್ಕೆ ಹಾನಿಕರವಲ್ಲ, ಬದಲಿಗೆ ಅನೇಕ ಬಗೆಯಲ್ಲಿ ಲಾಭಕರವಿದೆ ಎಂಬ ಬಗ್ಗೆ, ಸಂಶೋಧನೆಗಳು ನಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಲೋಕಸಭಾ ಸದಸ್ಯರೊಬ್ಬರು ಅಡಿಕೆ ಹಾನಿಕಾರಕ ಹಾಗೂ ಅದನ್ನು ಬ್ಯಾನ್ ಮಾಡಬೇಕು ಎಂದು ನೀಡಿದ್ದ ಹೇಳಿಕೆಯಿಂದ, ರೈತರು ಆತಂಕಕ್ಕೆ ಒಳಗಾಗಿದ್ದರು. ಈ ಕಾರಣದಿಂದಾಗಿ, ಅಡಿಕೆ ದೇಹಕ್ಕೆ ಹಾನಿಕಾರಕ ಅಲ್ಲ. ಈ ರೀತಿ ಹೇಳಿಕೆಯಿಂದಾಗಿ ಅಡಿಕೆ ಮಾರುಕಟ್ಟೆ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಕರ್ನಾಟಕ ರಾಜ್ಯದ ಅಡಿಕೆ ಟಾಸ್ಕ್ ಫೋರ್ಸ್ (Karnataka State Areca Task Force) ನಿಯೋಗದ ವತಿಯಿಂದ ದೆಹಲಿಗೆ ತೆರಳಿ ಸಚಿವರನ್ನು ಭೇಟಿ ಮಾಡಲಾಗಿತ್ತು ಎಂದರು. ಇದನ್ನೂ ಓದಿ: ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್ಈ ಸಂಬಂಧ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ಥೋಮರ್ ಹಾಗೂ ರಾಜ್ಯ ಸಚಿವರನ್ನು ಭೇಟಿ ಮಾಡಲಾಗಿದ್ದು, ಅಡಿಕೆ ಬಗ್ಗೆ ಕೋರ್ಟ್‍ನಲ್ಲಿ ತೀರ್ಮಾನ ಆಗದೆ ಯಾವುದೇ ಹೇಳಿಕೆಗಳನ್ನು ನೀಡಬಾರದು, ಅದು ಅಡಿಕೆ ಬೆಳೆಗಾರರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.ಅಡಿಕೆ ಮನುಷ್ಯನ ದೇಹಕ್ಕೆ ಹಾನಿಕರಕ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಒಂದು ಅಫಿಡವಿಟ್ ನೀಡಿದ್ದು, ಈ ಅಫಿಡವಿಟ್ ಅನ್ನು ತೆಗೆಯುವ ಸಲುವಾಗಿ ನಾವು ಪ್ರಯತ್ನ ಮಾಡ್ತಿದ್ದೇವೆ ಹಾಗೂ ಅಡಿಕೆ ಹಾನಿಕರಕ ಅಲ್ಲಾ ಎಂಬ ಬಗ್ಗೆ ನಮ್ಮ ರಾಜ್ಯದಲ್ಲಿ ಸಂಶೋಧನೆಯನ್ನು ಸಹ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ (Ramaiah institute of medical sciences) ನಮ್ಮ ಟಾಸ್ಕ್ ಫೋರ್ಸ್ ಕಡೆಯಿಂದ ಸಂಶೋಧನೆ ನಡೆಯುತ್ತಲಿದೆ, ಹಾಗೂ ಕೇಂದ್ರದಿಂದಲೂ ಸಹ ಈ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿಯನ್ನು ರಚನೆ ಮಾಡಲಾಗುತ್ತಿದೆ. ಅಡಿಕೆ ಸೇವನೆ, ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದರ ಬಗ್ಗೆ ಒಂದು ಸ್ಪಷ್ಟ ನಿರ್ಧಾರಕ್ಕೆ ಇದರಿಂದ ಬರುವ ನಿರೀಕ್ಷೆಯಿದೆ ಹಾಗೂ ರೈತ ಸಮುದಾಯಕ್ಕೆ ಇದರಿಂದ ಬಹಳ ದೊಡ್ಡ ಯಶಸ್ಸು ದೊರೆಯಲಿದೆ. ನಾವು ನೀಡಿರುವ ಈ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮಗೆ ಅತ್ಯಂತ ಸಂತೋಷವಾಗಿದೆ ಎಂದರು.






 Advertisement 




Sign in to your account
Username or Email Address


Password

 Remember Me


