ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆ. ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್ಮುಂದಿನ ಎರಡು ದಿನ ಕರಾವಳಿ ಭಾಗದ ಕೆಲ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಮೂರು ಮತ್ತು ನಾಲ್ಕನೇ ದಿನ ಕರಾವಳಿಯ ಹಲವು ಕಡೆ ಮಳೆ ಸಾಧ್ಯತೆ. ಮುಂದಿನ ನಾಲ್ಕು ದಿನ ಕರಾವಳಿ ಯಲ್ಲಿ ಸಿಡಿಲು ಗುಡುಗಿನ ಎಚ್ಚರಿಕೆ ನೀಡಲಾಗಿದೆ. ಇಂದು ನಾಳೆ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ23,24,25 ನೇ ತಾರೀಖು ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಬಹುತೇಕ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ. 23,24 ನೇ ತಾರೀಖು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ.Sign in to your account
Username or Email Address


Password

 Remember Me


