ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಥಿಯೇಟರ್ ಗೆ ಬರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಸಿನಿಮಾ ತಂಡ ದೇವಸ್ಥಾನಗಳಿಗೆ ಭೇಟಿ ನೀಡಿ ಸಿನಿಮಾದ ಗೆಲುವಿನ ಬಗ್ಗೆ ಪ್ರಾರ್ಥಿಸುತ್ತಿದೆ. ಮೊನ್ನೆಯಷ್ಟೇ  ಕರ್ನಾಟಕದಲ್ಲಿ ಪ್ರಿ ರಿಲೀಸ್ ಇವೆಂಟ್ ಮಾಡಿದ್ದ ರಾಜಮೌಳಿ ಅಂಡ್ ಟೀಮ್ ಇದೀಗ ಅಮೃತಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ಕೊಟ್ಟಿದೆ.ಈ ಅಮೃತಸರದ ಗೋಲ್ಡನ್ ಟೆಂಪಲ್ ದರ್ಶನ ಪಡೆದರೆ, ಅಂದುಕೊಂಡದ್ದು ಎಲ್ಲವೂ ನೆರವೇರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿಯೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಒಟ್ಟಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರುಈಗಾಗಲೇ ಆರ್.ಆರ್.ಆರ್ ಸಿನಿಮಾ ಅತೀ ನಿರೀಕ್ಷೆಯನ್ನು ಮೂಡಿಸಿದೆ. ಹಲವು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟ್ರೇಲರ್ ಸಖತ್ ಕ್ರೇಜ್ ಕ್ರಿಯೇಟ್ ಮಾಡಿವೆ. ಹಾಗಾಗಿಯೇ ಈ ಚಿತ್ರಕ್ಕಾಗಿ ವಿಶ್ವದಾದ್ಯಂತ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮಇದೇ ಮೊದಲ ಬಾರಿಗೆ ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ತೆರೆ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಸೇರಿದಂತೆ ಹಲವು ತಾರೆಯರ ಬಳಗವೇ ಈ ಸಿನಿಮಾದಲ್ಲಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿದೆ.Sign in to your account
Username or Email Address


Password

 Remember Me


