ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರಂಕಿ ಆಟ ಮುಂದುವರಿದಿದೆ. ನಿನ್ನೆ ಒಟ್ಟು 173 ಕೇಸ್ ದಾಖಲಾಗಿತ್ತು. ಇಂದು ಒಟ್ಟು 109ಕ್ಕೆ ಇಳಿಕೆ ಕಂಡಿದ್ದು, 2 ಮರಣ ಪ್ರಕರಣ ವರದಿಯಾಗಿದೆ.ಇಂದು ಬೆಂಗಳೂರಿನಲ್ಲಿ ಮತ್ತು ಹಾಸನದಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ಈವರೆಗೆ ಒಟ್ಟು ರಾಜ್ಯದಲ್ಲಿ 40,037 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಒಟ್ಟು 91 ಪಾಸಿಟಿವ್ ಕೇಸ್ ಮತ್ತು 1 ಮರಣ ಪ್ರಕರಣ ವರದಿಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.39%ಕ್ಕೆ ಮತ್ತು ಮರಣ ಪ್ರಮಾಣ 1.83%ಕ್ಕೆ ಇಳಿಕೆ ಕಂಡಿದೆ. ಇದನ್ನೂ ಓದಿ: ಭಾರತಕ್ಕೆ ತೈಲ ಶಾಕ್ – ಡೀಸೆಲ್ ಬೆಲೆ ಲೀ.25 ರೂ. ಏರಿಕೆರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,995ಕ್ಕೆ ಇಳಿಕೆ ಕಂಡಿದೆ. ಒಟ್ಟು 153 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,44,717 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,02,640 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,562 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,838 ಸ್ಯಾಂಪಲ್ (ಆರ್‌ಟಿಪಿಸಿಆರ್ 19,424 + 8,414 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 91, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 4, ರಾಯಚೂರು 1, ರಾಮನಗರ 0, ಶಿವಮೊಗ್ಗ 0, ತುಮಕೂರು 2, ಉಡುಪಿ 1, ಉತ್ತರ ಕನ್ನಡ 0, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


