ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದಾವಣಗೆರೆ ಉತ್ತರದಿಂದ ಸ್ಪರ್ಧೆ ಮಾಡುವ ಬಗ್ಗೆ ಬಸವರಾಜ ಬೊಮ್ಮಾಯಿ ನನ್ನ ಜೊತೆ ಮಾತನಾಡಿಲ್ಲ. ಅವರು ವಿರೋಧ ಪಕ್ಷದವರು ನನ್ನ ಜೊತೆ ಯಾಕೆ ಮಾತನಾಡುತ್ತಾರೆ. ಆದರೆ ಮುಂದೆ 16ಕ್ಕೆ ನಮ್ಮ ಮೊಮ್ಮಗಳ ಮದುವೆ ಇದೆ ಸಿಎಂ ಅಂತೂ ಬರುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಪ್ಲೇಸ್‍ನಲ್ಲಿ ಪೊಲೀಸ್‍ಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆSign in to your account
Username or Email Address


Password

 Remember Me


