ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಆರ್.ಆರ್.ಆರ್ ಸಿನಿಮಾದ ಕಾರ್ಯಕ್ರಮಕ್ಕಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಆತ್ಮೀಯ ಸ್ನೇಹಿತರಾದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನೋಡುವುದಕ್ಕೆ ಆಗಿಲ್ಲ. ಆರ್.ಆರ್.ಆರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿರುವೆ. ಇದು ಸಿನಿಮಾ ರಿಲೀಸ್ ಆದ ತಕ್ಷಣವೇ ಜೇಮ್ಸ್ ಸಿನಿಮಾ ನೋಡುವೆ’ ಎಂದಿದ್ದಾರೆ ಜ್ಯೂನಿಯರ್.ಜ್ಯೂ.ಎನ್ಟಿಆರ್ ಮತ್ತು ಪುನೀತ್ ರಾಜ್ ಕುಮಾರ್ ಸ್ನೇಹ ಗಾಢವಾದದ್ದು. ಗೆಳೆತನದ ಕಾರಣಕ್ಕಾಗಿ ಪುನೀತ್ ಅವರ ಚಿತ್ರಕ್ಕೆ ಜೂ.ಎನ್.ಟಿ.ಆರ್ ಹಾಡು ಹೇಳಿದ್ದರು. ಇವರ ಕಾರ್ಯಕ್ರಮಕ್ಕಾಗಿ ಹಲವು ಬಾರಿ ಪುನೀತ್ ರಾಜ್ ಕುಮಾರ್ ಹೈದರಾಬಾದ್ ಗೆ ಹೋಗಿದ್ದಾರೆ. ಅಷ್ಟೊಂದು ಸ್ನೇಹ ಇವರಲ್ಲಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿಪುನೀತ್ ಸಿನಿಮಾ ಬಿಡುಗಡೆಯ ಬೆನ್ನಲ್ಲೇ ಜ್ಯೂನಿಯರ್ ಚಿತ್ರವೂ ರಿಲೀಸ್ ಆಗುತ್ತಿದೆ. ಜೇಮ್ಸ್ ಒಳ್ಳೆಯ ಓಪನಿಂಗ್ ಪಡೆದಿದೆ. ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photosರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.Sign in to your account
Username or Email Address


Password

 Remember Me


