ಬೆಳಗಾವಿ: ಬೈಲಹೊಂಗಲದ ಉಪ ಕಾರಾಗೃಹದಿಂದ ಹಾಡಹಗಲೇ ವಿಚಾರಣಾಧೀನ ಕೈದಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯವೀಕ್ಷಕನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.ಜಿಲ್ಲೆಯ ಉಪ ಕಾರಾಗೃಹದ ಮುಖ್ಯವೀಕ್ಷಕ ವೈ.ಐ.ಬುಗ್ನಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಕೈದಿ ಪರಾರಿಯಾಗಿದ್ದಾನೆ ಎಂದು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ಪ, ಸಹೋದರ, ತಾತ, ಚಿಕ್ಕಪ್ಪನಿಂದಲೇ 5 ವರ್ಷದ ಹುಡುಗಿ ಮೇಲೆ ನಿರಂತರ ಅತ್ಯಾಚಾರಕಳೆದ ಹದಿನೈದು ದಿನಗಳ ಹಿಂದೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾದಿರಸಾಬ್ ರಾಜೇಖಾನ್(34) ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತನ ವಿರುದ್ಧ ಕೊಲೆ ಯತ್ನ, ದೊಂಬಿ, ಜಾತಿ ನಿಂದನೆ ಸೇರಿ 6 ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: 3 ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಆಮದಿಗೆ ರಷ್ಯಾದೊಂದಿಗೆ ಭಾರತ ಒಪ್ಪಂದಈತನನ್ನು ಬೈಲಹೊಂಗಲ ಪಟ್ಟಣದ ಉಪ ಕಾರಾಗೃಹದಲ್ಲಿ ಕಳೆದ 15 ದಿನಗಳಿಂದ ಬಂಧಿಸಲಾಗಿತ್ತು. ಆದರೆ ನಿನ್ನೆ ಆರೋಪಿ ಖಾದಿರಸಾಬ್ ಬೈಲಹೊಂಗಲ ಕಾರಾಗೃಹದಿಂದ ಮುಖ್ಯದ್ವಾರದ ಕೀ ಬಳಸಿಕೊಂಡು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಾನಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾರಾಗೃಹದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.Sign in to your account
Username or Email Address


Password

 Remember Me


