ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್19,20 ರಂದು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ,ಹಾಸನ,ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ. ಇದನ್ನೂ ಓದಿ: ದಾಖಲೆ ಬರೆದ ಜೇಮ್ಸ್ – ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ಚಿತ್ರSign in to your account
Username or Email Address


Password

 Remember Me


