ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ.ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಎಸ್.ವಿ.ಟಿ. ಎಂಬ ಖಾಸಗಿ ಬಸ್‍ನಲ್ಲಿ ಒಟ್ಟು 30ಕ್ಕೂ ಹೆಚ್ಚು  ಪ್ರಯಾಣಿಕರು ಇದ್ದರು. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆSign in to your account
Username or Email Address


Password

 Remember Me


