ಬೆಂಗಳೂರು: ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯ ಗಾಯತ್ರಿ ನಗರದಲ್ಲಿ ತಡರಾತ್ರಿ ನಡೆದಿದೆ.ವಿಂದ್ಯಾಶ್ರೀ ನೇಣಿಗೆ ಶರಣಾದ ಪತ್ನಿಯಾಗಿದ್ದು, ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ರಾಕೇಶ್ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆ ಮನನೊಂದ ಪತ್ನಿಯು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದಾಳಿಎಂಕಾಂ ಮಾಡಿದ್ದ ವಿಂದ್ಯಾ ಅವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ವಿಂದ್ಯಾ ಶ್ರೀ ಅವರ ತಂದೆಯು ಪತಿ ರಾಕೇಶ್ ವಿರುದ್ಧ ದೂರು ನೀಡಿದ್ದಾರೆ. ಸುಬ್ರಮಣ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೋಮವಾರ ಬೆಳಗ್ಗೆ 9.30ಕ್ಕೆ ಮೃತದೇಹ ಮನೆಗೆ ಬರಲಿದೆ: ನವೀನ್ ತಂದೆSign in to your account
Username or Email Address


Password

 Remember Me


