ಬೀದರ್: ಇಂದು ಬೆಳಗ್ಗೆಯೇ ತುಮಕೂರಿನ ಪಾವಗಡದಲ್ಲಿ ಬಸ್ ಪಲ್ಟಿಯಾಗಿ 8ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಗಡಿಜಿಲ್ಲೆ ಬೀದರ್‌ನಲ್ಲೂ ಖಾಸಗಿ ಟ್ರಾವೇಲ್ಸ್ ಪಲ್ಟಿಯಾಗಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಬೆಂಗಳೂರಿನಿಂದ ಬೀದರ್‌ಗೆ ಬರುತ್ತಿದ್ದ ಖಾಸಗಿ ಟ್ರಾವೇಲ್ಸ್ ಬಸ್‍ಗೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ಹಿನ್ನೆಲೆ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಪಿಯಾಗಿದೆ. ಖಾಸಗಿ ಬಸ್‍ನಲ್ಲಿದ್ದ ಸುಮಾರು 6 ಮಂದಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವುಈ ಘಟನೆ ಬೀದರ್ ತಾಲೂಕಿನ ಅಣದೂರು ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ಪಲ್ಟಿಯಾದ ಪರಿಣಾಮ ರಸ್ತೆ ಪಕ್ಕ ಬಿದ್ದಿತ್ತು. ಚಿಂತಾಜನಕವಾದ ಪ್ರಯಾಣಿಕರನ್ನು ಸ್ಥಳೀಯರ ಸಹಾಯದಿಂದ ಬ್ರೀಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.ಸುದ್ದಿ ತಿಳಿದ ಪ್ರಯಾಣಿಕರ ಸಂಬಂಧಿಗಳು ಬ್ರೀಮ್ಸ್ ಆಸ್ಪತ್ರೆಗೆ ಹೋಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಮಾಹಿತಿಯನ್ನು ಸ್ಥಳೀಯರು ಜನವಾಡ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಸ್ತುತ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತSign in to your account
Username or Email Address


Password

 Remember Me


