ಕರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ.ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಅದನ್ನು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವಿಸಲು ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಿದ್ದೇವೆ’ ಎಂದರು. ಇದನ್ನೂ ಓದಿ : ಕೆಜಿಎಫ್ 2.. ಹುಷಾರ್, ಮಾರ್ಚ್ 21ಕ್ಕೆ ತೂಫಾನ್ ಅಪ್ಪಳಿಸಲಿದೆ!ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮಾರ್ಚ್ 20ರಂದು ಕಂಗೇರಿ ಉಪನಗರದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ಒಟ್ಟು 40 ರಿಂದ 50 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಲಾಗಿದ್ದು, ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.Sign in to your account
Username or Email Address


Password

 Remember Me


