ಧಾರವಾಡ: ಯುವಕರ ತಂಡವೊಂದು ದಾಂಡೇಲಿಗೆ ಪ್ರವಾಸ ಹೋಗುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಹುಬ್ಬಳ್ಳಿಯ ಹೊರಹೊಲಯದ ಗಬ್ಬೂರ ಬೈಪಾಸ್ ಬಳಿ ನಡೆದಿದೆ.ರಂಜಿತ್ ಮತ್ತು ರಾಕೇಶ್ ಅಪಘಾತದಲ್ಲಿ ಮೃತಪಟ್ಟಿರುವ ಯುವಕರು. ಮೃತರು ಚಿಕ್ಕಬಳ್ಳಾಪುರದ ನಿವಾಸಿಗಳಾಗಿದ್ದು, ತಮ್ಮ ಊರಿನಿಂದ ದಾಂಡೇಲಿಗೆ ಪ್ರವಾಸ ಹೊರಟ್ಟಿದ್ದರು. ಈ ವೇಳೆ ಯುವಕರಿದ್ದ ಇನ್ನೋವಾ ಕಾರ್ ಹುಬ್ಬಳ್ಳಿ ಬೈಪಾಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ರೊಲ್ಸ್ ರಾಯಲ್ಸ್‌ಗಾಗಿ ಮತ್ತೊಂದು ವಿವಾದಕ್ಕೆ ಸಿಲುಕಿದ ವಿಜಯ್ ದಳಪತಿಸದ್ಯ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧSign in to your account
Username or Email Address


Password

 Remember Me


