ಮೈಸೂರು: ಅಪ್ಪು ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆಯಲ್ಲಿ ಅಪ್ಪು ಅಭಿಮಾನಿ ಕುಸಿದು ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ.ಆಕಾಶ್ (22) ಸಂಭ್ರಮಾಚರಣೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಿನ್ನೆ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಆಕಾಶ್ ಕುಸಿದು ಬಿದ್ದಿದ್ದ. ಆಕಾಶ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಜೇಮ್ಸ್ ಮತ್ತು ಅಪ್ಪು ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿತ್ತು.ಹೆಡಿಯಾಲ ಗ್ರಾಮದ ಬಸ್ ನಿಲ್ದಾಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.Sign in to your account
Username or Email Address


Password

 Remember Me


