ಬೆಂಗಳೂರು: ಮದುವೆಯಾಗುವಂತೆ ಕೇಳಿದ್ದಕ್ಕೆ ಯುವತಿ ಮೇಲೆ ಪ್ರಿಯಕರ ಪೆಟ್ರೋಲ್ ಸುರಿದು ಹತ್ಯೆಗೈದಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಎಂಜಿನಿಯರಿಂಗ್ ಓದುವ ವೇಳೆ ದಾನೇಶ್ವರಿ ಅವರು ಎಲೆಕ್ಟ್ರಾನಿಕ್ ಸಿಟಿ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್‍ನನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗಷ್ಟೇ ದಾನೇಶ್ವರಿ ಅವರು ಪ್ರಿಯಕರ ಶಿವಕುಮಾರ್‍ನನ್ನು ಮದುವೆಯಾಗುವಂತೆ ಕೇಳಿದ್ದಾರೆ. ಆದರೆ ಜಾತಿ ಕಾರಣ ನೀಡಿ ಮದುವೆಯಾಗಲು ಶಿವಕುಮಾರ್ ನಿರಾಕರಿಸಿದ್ದಾನೆ. ಅಲ್ಲದೆ ಮದುವೆಯಾಗಲ್ಲ, ಬೇಕಿದ್ದರೆ ನಿನ್ನನ್ನು ಸಾಯಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.ಮದುವೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕೂಡಲೇ ಗಾಯಗೊಂಡ ದಾನೇಶ್ವರಿ ಅವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಸಾವನ್ನಪ್ಪಿದ್ದಾರೆ. ಇದೀಗ ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಸ್‍ಸಿ, ಎಸ್‍ಟಿ ಕಾಯ್ದೆ, IPC ಸೆಕ್ಷನ್ 302 ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣಈ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಯುವತಿ ತಂದೆ ಅಶೋಕ್ ಶರ್ಮ, ದಾನೇಶ್ವರಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ಹೇಳಿದಳು. ಇಬ್ಬರು ಒಂದೇ ಕಾಲೇಜಿನಲ್ಲಿ ಓದುವಾಗ ಪ್ರೀತಿ ಮಾಡಿದ್ದಾರೆ. ನಾನು ಅವನನ್ನೇ ಮದುವೆಯಾಗುತ್ತೇನೆ, ಆದರೆ ಅವನು ಒಪ್ಪುತ್ತಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ಹುಡುಗ ಶಿವಕುಮಾರ್ ಬಾದಾಮಿ ಮೂಲದವನು. ನಿನ್ನ ಮದುವೆಯಾದರೆ ನನ್ನ ತಾಯಿ ತಂದೆ ಸೇರಿಸುವುದಿಲ್ಲ ಅಂತ ಹೇಳಿದ್ದಾನೆ ಎಂದು ತಿಳಿಸಿದ್ದಳು ಎಂದರು. ಇದನ್ನೂ ಓದಿ:  ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯನಮ್ಮ ಹುಡುಗಿ ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹಾಗಾಗಿ ಬಿಟಿಎಂ ಲೇಔಟ್‍ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿದುಬಂದಿತು. ಅಲ್ಲಿಂದ ಕೂಡಲೇ ಆಸ್ಪತ್ರೆಗೆ ದುಡ್ಡು ಕಳಿಸಿ ಚಿಕಿತ್ಸೆ ನೀಡಲು ತಿಳಿಸಿದ್ದೆ. ಪೊಲೀಸರು ಆಕೆನೇ ಪೆಟ್ರೋಲ್ ಹಾಕಿಕೊಂಡಿದ್ದಾಳೆ ಎಂದು ಹೇಳುತ್ತಿದ್ದಾರೆ. ಆದರೆ ಶಿವಕುಮಾರ್ ಮೈನ್ ರೋಡ್ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್ ಕೊಟ್ಟಿದ್ದಾನೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.Sign in to your account
Username or Email Address


Password

 Remember Me


