ಬೆಂಗಳೂರು: ರಾಜ್ಯದಲ್ಲಿ ಇಂದು ನಿನ್ನೆಗಿಂತ ಕಡಿಮೆ ಕೇಸ್ ದಾಖಲಾಗಿದೆ. ನಿನ್ನೆ ಒಟ್ಟು 145 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿತ್ತು. ಇಂದು ಒಟ್ಟು 140 ಕೇಸ್ ವರದಿಯಾಗಿದ್ದು, ಒಟ್ಟು 2 ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರು ನಗರದಲ್ಲಿ ಒಟ್ಟು 99 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ವರದಿಯಾಗಿರುವುದನ್ನು ಹೊರತು ಪಡಿಸಿ ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಒಟ್ಟು 14 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ವರದಿಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.37%ಕ್ಕೆ ಮತ್ತು ಮರಣ ಪ್ರಮಾಣ 1.42%ಕ್ಕೆ ಇಳಿಕೆ ಕಂಡಿದೆ. ಇದನ್ನೂ ಓದಿ: ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ: ಕೇಂದ್ರದ ವಿರುದ್ಧ ಕೃಷ್ಣಬೈರೇಗೌಡ ವಾಗ್ದಾಳಿರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,067ಕ್ಕೆ ಇಳಿಕೆ ಕಂಡಿದೆ. ಒಟ್ಟು 162 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,44,326 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,02,190 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 61,244 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 37,264 ಸ್ಯಾಂಪಲ್ (ಆರ್‌ಟಿಪಿಸಿಆರ್ 28,622 + 8,642 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅವರು ನನ್ನನ್ನು ನರೇಂದ್ರ ಮೋದಿ ಚಮಚಾ ಅಂತಾರೆ: ಪ್ರಕಾಶ್ ಬೆಳವಾಡಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 99, ಬೀದರ್ 2, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 0, ಚಿತ್ರದುರ್ಗ 10, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 2, ಮೈಸೂರು 3, ರಾಯಚೂರು 0, ರಾಮನಗರ 1, ಶಿವಮೊಗ್ಗ 0, ತುಮಕೂರು 1, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


