ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ (Tamilnadu Minister) ಎಂ.ಕೆ ಉದಯನಿಧಿ ಸ್ಟಾಲಿನ್‍ಗೆ (Udhayanidhi Stalin) ಬಿಗ್ ರಿಲೀಫ್ ಸಿಕ್ಕಿದೆ.ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಸ್ಟಾಲಿನ್ ಹಾಜರಾತಿಯನ್ನು ಪರಿಗಣಿಸಿದ ಕೋರ್ಟ್, 5 ಸಾವಿರ ನಗದು ಹಾಗೂ 50 ಸಾವಿರ ಮೊತ್ತದ ಆರೋಪಿ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದೆ. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು.ಸ್ಟಾಲಿನ್ ಪರ ವಕೀಲರ ವಾದ ಏನಿತ್ತು?: ಉಳಿದ ಆರೋಪಿಗಳು ಎಲ್ಲಿ ಜಡ್ಜ್ ಪ್ರಶ್ನೆಗೆ ಸ್ಟಾಲಿನ್ ಪರ ವಕೀಲರು, 2- 4 ವರೆಗಿನ ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಅವರಲ್ಲಿ ಒಬ್ಬರು ರಾಜ್ಯದ ಕ್ರೀಡಾ ಸಚಿವ. ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕೋರ್ಟ್‍ಗೆ ಮನವಿ ಮಾಡಿಕೊಂಡರು. ಇದೇ ವೇಳೆ ಸುಪ್ರೀಂ ಕೋರ್ಟ್ ನಿಂದ ವಿನಾಯಿತಿ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಿಕ್ಕಿಲ್ಲ. ಹೀಗಾಗಿ ಜುಲೈ ಕೊನೆಯ ವಾರದ ಒಳಗೆ ಪ್ರತಿ ನೀಡಲು ಸೂಚನೆ ನೀಡಲಾಗಿದೆ ಎಂದರು.ಏನಿದು ಪ್ರಕರಣ?: 2023ರ ಸೆಪ್ಟೆಂಬರ್ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಯಾವುದೇ ಕ್ಷಣದಲ್ಲಾದ್ರೂ ಪ್ರೀತಂ ಗೌಡಗೆ ಎಸ್‍ಐಟಿಯಿಂದ ನೊಟೀಸ್ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.Sign in to your account
Username or Email Address


Password

 Remember Me


