ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಸಿನಿಮಾ ಜೇಮ್ಸ್ ಇಂದು ರಾಜ್ಯಾದ್ಯಂತ ತೆರೆ ಕಂಡು ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಅಪ್ಪು ನೆನೆದು ಕಾಲಿವುಡ್ ನಟಿ ಪ್ರಿಯಾ ಆನಂದ್ ಬಿಕ್ಕಿ, ಬಿಕ್ಕಿ ಅತ್ತಿದ್ದಾರೆ.ಇಂದು ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಜೇಮ್ಸ್ ಸಿನಿಮಾ ರಿಲೀಸ್ ಮಾಡಿ ಅಭಿಮಾನಿಗಳಿಗೆ ಚಿತ್ರತಂಡ ರಸದೌತಣ ನೀಡಿದೆ. ಈ ನಡುವೆ ಜೇಮ್ಸ್ ಸಿನಿಮಾ ವೀಕ್ಷಿಸಲು ಜನ ಚಿತ್ರಮಂದಿರಗಳಿಗೆ ಮುಗಿಬೀಳುತ್ತಿದ್ದಾರೆ. ಸದ್ಯ ಅಭಿಮಾನಿಗಳೊಂದಿಗೆ ಕುಳಿತು ಸಿನಿಮಾ ವೀಕ್ಷಿಸಲು ನವರಂಗ್ ಚಿತ್ರಮಂದಿರಕ್ಕೆ ಭೇಟಿ ನೀಡಿದ ಜೇಮ್ಸ್ ಸಿನಿಮಾದ ನಟಿ ಪ್ರಿಯಾ ಆನಂದ್ ಕಾರಿನಲ್ಲಿ ಕುಳಿತು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಅಪ್ಪು ಮೇಲೆ ಅಭಿಮಾನಿಗಳು ಹೊಂದಿರುವ ಅಪಾರ ಪ್ರೀತಿ ಹಾಗೂ ಅಭಿಮಾನವನ್ನು ನೋಡಿ ಮಾರುಹೋಗಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್ಈ ಹಿಂದೆ ರಾಜಕುಮಾರ ಸಿನಿಮಾದಲ್ಲಿ ಪುನೀತ್‍ಗೆ ಜೋಡಿಯಾಗಿದ್ದ ಪ್ರಿಯಾ ಆನಂದ್ ಅಭಿನಯಿಸಿದ್ದರು. ಈ ಸಿನಿಮಾ ಪ್ರಿಯಾ ಆನಂದ್ ಅವರಿಗೆ ದೊಡ್ಡ ಬ್ರೇಕ್ ತಂದು ಕೊಟ್ಟಿತ್ತು. ಇದಾದ ಬಳಿಕ ಅಪ್ಪು ಜೊತೆ ಜೇಮ್ಸ್ ಸಿನಿಮಾದಲ್ಲಿ ಪ್ರಿಯಾ ಆನಂದ್ ಮತ್ತೊಮ್ಮೆ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?Sign in to your account
Username or Email Address


Password

 Remember Me


