ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 145 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 2 ಮರಣ ಪ್ರಕರಣ ವರದಿಯಾಗಿರುವುದನ್ನು ಹೊರತು ಪಡಿಸಿ ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.ಪಾಸಿಟಿವಿಟಿ ರೇಟ್ 0.35%ಕ್ಕೆ ಮತ್ತು ಮರಣ ಪ್ರಮಾಣ 1.38%ಕ್ಕೆ ಇಳಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಒಟ್ಟು 97 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕಿ ಮೇಲೆ ಗ್ಯಾಂಗ್ ರೇಪ್- 24 ಗಂಟೆಯಲ್ಲಿ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,092ಕ್ಕೆ ಇಳಿಕೆ ಕಂಡಿದೆ. ಒಟ್ಟು 392 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,44,186 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,02,028 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 70,321 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 41,097 ಸ್ಯಾಂಪಲ್ (ಆರ್‌ಟಿಪಿಸಿಆರ್ 26,882 + 14,215 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಚೀನಾ ಬಳಿಕ ದಕ್ಷಿಣ ಕೊರಿಯಾ – ಕೋವಿಡ್ ಪ್ರಕರಣಗಳಲ್ಲಿ ಭಾರೀ ಏರಿಕೆ!ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 97, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 8, ದಕ್ಷಿಣ ಕನ್ನಡ 2, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 1, ಹಾವೇರಿ 2, ಕಲಬುರಗಿ 4, ಕೊಡಗು 0, ಕೋಲಾರ 0, ಕೊಪ್ಪಳ 0, ಮಂಡ್ಯ 0, ಮೈಸೂರು 17, ರಾಯಚೂರು 0, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ 0, ಉತ್ತರ ಕನ್ನಡ 0, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


